ರಾಷ್ಟ್ರೀಯ ಶಿಕ್ಷಣ ನೀತಿ ಕರಡು-೨೦೧೯

ಸುದ್ಧಿ

ಶಿಕ್ಷಣದಲ್ಲಿ ಏಕರೂಪತೆ ತರಲು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಪ್ರಾಥಮಿಕ ಗುಣಮಟ್ಟ ಸುಧಾರಿಸುವತ್ತ ಗಮನಹರಿಸುವ ಸಲುವಾಗಿ ರಾಷ್ಟ್ರೀಯ ಶಿಕ್ಷಣ ನೀತಿಗೆ 34 ವರ್ಷಗಳ ಬಳಿಕ ಮಹತ್ವದ ಬದಲಾವಣೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ಹೊಸ ಶಿಕ್ಷಣ ನೀತಿಗೆ ಅನುಮೋದನೆ ನೀಡಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿಯ ಪ್ರಮುಖಾಂಶಗಳು

Kannada1-Copy

ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವನ್ನು (ಎಂಎಚ್​ಆರ್​ಡಿ) ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿದೆ.

ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಮಕ್ಕಳಿಗೆ 5ನೇ ತರಗತಿವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ಕಡ್ಡಾಯಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಗಳ ಪ್ರವೇಶಕ್ಕೆ ಏಕರೂಪ (ಸಾಮಾನ್ಯ) ಪ್ರವೇಶ ಪರೀಕ್ಷೆ ನಡೆಸುವುದು

ಖಾಸಗಿ ಮತ್ತು ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಒಂದೇ ರೀತಿಯ ನಿಯಮ ಅನ್ವಯವಾಗಲಿದೆ.

ಮಾಸ್ಟರ್ ಆಫ್ ಫಿಲಾಸಫಿ ಕೋರ್ಟ್​ಗಳಿಗೆ ಇನ್ನು ಮುಂದೆ ಅವಕಾಶವಿಲ್ಲ

ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಇ- ಕೋರ್ಸ್​ಗಳ ಅಭಿವೃದ್ಧಿಪಡಿಸುವುದು. ವರ್ಚುವಲ್ ಲ್ಯಾಬ್​ಗಳು, ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆ ರೂಪಿಸುವುದು

2035ರ ವೇಳೆಗೆ ಶೇ. 50ರಷ್ಟು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗುವಂತೆ ಮಾಡುವ ಗುರಿಯನ್ನು ಹೊಸ ಶಿಕ್ಷಣ ನೀತಿ ಒಳಗೊಂಡಿದೆ.

ಎಲ್ಲ ಉನ್ನತ ಶಿಕ್ಷಣಗಳಿಗೆ ಒಂದೇ ನಿಯಂತ್ರಣ ಸಂಸ್ಥೆ ಇರಲಿದೆ.

ಶೈಕ್ಷಣಿಕ, ಆಡಳಿತ ಹಾಗೂ ಹಣಕಾಸು ಸ್ವಾಯತ್ತತೆಯನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಪ್ರಸ್ತುತ ಡೀಮ್ಡ್ ವಿವಿಗಳು, ಸೆಂಟ್ರಲ್ ವಿವಿಗಳು, ಪ್ರತ್ಯೇಕ ಸಂಸ್ಥೆಗಳಿಗೆ ಪ್ರತ್ಯೇಕ ನಿಯಮಾವಳಿಗಳಿವೆ. ಹೊಸ ಶಿಕ್ಷಣ ನೀತಿಯ ಅನ್ವಯ, ಗುಣಮಟ್ಟದ ಕಾರಣಗಳಿಂದ ಎಲ್ಲ ಸಂಸ್ಥೆಗಳಿಗೂ ಒಂದೇ ರೀತಿಯ ನಿಯಮಗಳು ಅನ್ವಯವಾಗಲಿದೆ.

ವಿದ್ಯಾರ್ಥಿಗಳಿಗೆ ಪ್ರಗತಿ ಪತ್ರಗಳಲ್ಲಿ ಕೇವಲ ಅಂಕಗಳು ಹಾಗೂ ಟಿಪ್ಪಣಿಗಳ ಬದಲು ಕೌಶಲ ಹಾಗೂ ಅರ್ಹತೆಗಳ ಸಮಗ್ರ ವರದಿ ನೀಡಲಾಗುತ್ತದೆ.

ವೃತ್ತಿ ಆಧಾರಿತ ವಿಷಯಗಳು 6ನೇ ತರಗತಿ ಪಠ್ಯದೊಂದಿಗೆ ಸಂಯೋಜಿಸಲಾಗುತ್ತದೆ. ಕಲೆ ಮತ್ತು ವಿಜ್ಞಾನದ ರೀತಿ ಪ್ರತ್ಯೇಕಗೊಳಿಸಿದ ಶಿಕ್ಷಣ ವ್ಯವಸ್ಥೆ ಇರುವುದಿಲ್ಲ.

2 thoughts on “ರಾಷ್ಟ್ರೀಯ ಶಿಕ್ಷಣ ನೀತಿ ಕರಡು-೨೦೧೯

  1. Hi! Quick question that’s totally off topic. Do you know how to
    make your site mobile friendly? My blog looks weird when browsing from my iphone4.
    I’m trying to find a template or plugin that might be able to
    resolve this issue. If you have any recommendations,
    please share. With thanks!

Leave a Reply

Your email address will not be published. Required fields are marked *